ETV Bharat / state

ಬೆಂಗಳೂರು-ಮೈಸೂರು ಹೆದ್ದಾರಿಗೆ ಹೆಸರಿಡಲು ಕಾಂಗ್ರೆಸ್, ಬಿಜೆಪಿ ನಾಯಕರ ಪೈಪೋಟಿ

ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರಿಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

NITIN GADKARI
ಬೆಂಗಳೂರು-ಮೈಸೂರು ಹೆದ್ದಾರಿ
author img

By

Published : Jan 5, 2023, 2:13 PM IST

ಮಂಡ್ಯ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯ ಕಾಮಗಾರಿ ಇದೀಗ ಅಂತಿಮ ಹಂತಕ್ಕೆ ಬಂದಿದೆ. ಕಾಮಗಾರಿ ವೀಕ್ಷಿಸಲು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಆಗಮಿಸಿದ್ದು, ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ನಡುವೆ ಹೆದ್ದಾರಿಗೆ ನಾಮಕರಣ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರಲ್ಲಿ ಪತ್ರದ ಜಟಾಪಟಿ ನಡೆದಿದೆ ಎಂದು ತಿಳಿದುಬಂದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನ ಮಾಡಿದೆ. ಕೆಲವೇ ದಿನಗಳಲ್ಲಿ ಈ ಕೆಲಸ ಮುಕ್ತಾಯಗೊಳ್ಳಲಿದ್ದು ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಡಲಾಗುತ್ತದೆ.

ಈಗಾಗಲೇ ಕಾಮಗಾರಿ ಶೇ 88ರಷ್ಟು ಮುಕ್ತಾಯಗೊಂಡಿದೆ. ಬೆಂಗಳೂರಿನ ಕೆಂಗೇರಿಯಿಂದ ಮಂಡ್ಯ ನಗರದ ಗಡಿಯವರೆಗೆ ಕೆಲಸ ಬಹುತೇಕ ಮುಗಿದಿದೆ. ಮಂಡ್ಯದಿಂದ ಮೈಸೂರುವರೆಗೆ ಕಾಮಗಾರಿ ವೇಗ ಪಡೆದುಕೊಂಡಿದೆ. ಹೀಗಾಗಿ ಸಚಿವ ನಿತಿನ್ ಗಡ್ಕರಿ ದಶಪಥ ಹೆದ್ದಾರಿಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆ: ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬಂದ್

ಇದಾದ ಬಳಿಕ ಸಚಿವರು ರಸ್ತೆ ಸಂಚಾರ ಮಾಡುವ ಮೂಲಕ ಹೆದ್ದಾರಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸುವರು. ಅಲ್ಲದೇ ಕಾಮಗಾರಿ ಎಷ್ಟು ದಿನದಲ್ಲಿ ಕಂಪ್ಲೀಟ್​ ಆಗಬಹುದೆಂಬ ಮಾಹಿತಿಯನ್ನು ಕೂಡ ಪಡೆಯಲಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಇತರೆ ಪ್ರತಿನಿಧಿಗಳು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಬರೆದಿರುವ ಪತ್ರದ ಬಗ್ಗೆಯೂ ಅವರು ಪರಿಶೀಲನೆ ಮಾಡಲಿದ್ದಾರೆ.

ಇದೆಲ್ಲದರ ನಡುವೆ ಈ ಹೆದ್ದಾರಿಗೆ ನಾಮಕರಣದ ವಿಷಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈಗಾಗಲೇ ಸಂಸದ ಪ್ರತಾಪ್ ಸಿಂಹ 'ಕಾವೇರಿ ಎಕ್ಸ್‌ಪ್ರೆಸ್‌ ವೇ' ಎಂದು ಹೆಸರಿಡಲು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಎಕ್ಸ್‌ಪ್ರೆಸ್‌ ಹೈವೇ ಎಂದು ನಾಮಕರಣ ಮಾಡಬೇಕೆಂದು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಇದಕ್ಕೆ ಎಂಎಲ್‍ಸಿ ದಿನೇಶ್ ಗೂಳಿಗೌಡ ದನಿಗೂಡಿಸಿದ್ದಾರೆ.

ಇದನ್ನೂ ಓದಿ: ಸಚಿವ ಗಡ್ಕರಿಯಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ವೈಮಾನಿಕ ಸಮೀಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.