ಮಂಡ್ಯ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಯನ್ನು ನಂಬಬೇಡಿ. ನಿಖಿಲ್ ಹಾಗೂ ನನ್ನ ನಡುವೆ ಜಗಳವಾಗಿದೆ ಅನ್ನೋದು ಸುಳ್ಳು. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವುದಾಗಿ ಶಾಸಕ ಡಾ. ಅನ್ನದಾನ ತಮ್ಮ ಫೇಸ್ಬುಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಅನ್ನದಾನಿ ತಮ್ಮ ಅಧಿಕೃತ ಫೇಸ್ಬುಕ್ ಅಕೌಂಟ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಶೇರ್ ಮಾಡುವ ಮೂಲಕ ವಿರೋಧಿಗಳಿಗೆ ತಲುಪಿಸಿ ಎಂದು ಬರೆದುಕೊಂಡಿದ್ದಾರೆ. ತಮ್ಮ ವಿಡಿಯೋದಲ್ಲಿ ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿರುವೆ. ನಿಖಿಲ್ ಅವರಿಗಿಂತಲೂ ವಯಸ್ಸಿನಲ್ಲಿ ದೊಡ್ಡವನು ಇದ್ದೇನೆ. ದೇವೇಗೌಡರ ಕುಟುಂಬದಲ್ಲಿ ನನ್ನನ್ನು ಒಬ್ಬ ಸದಸ್ಯ ಎಂದು ಭಾವಿಸಿದ್ದಾರೆ.
ದೇವರಾಜು ಅರಸು ನಿಗಮ ಮಂಡಳಿಯಲ್ಲಿ ಕ್ಯಾಬಿನೆಟ್ ದರ್ಜೆಯ ಅಧ್ಯಕ್ಷನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕುಮಾರಸ್ವಾಮಿ ಅವರಾಗಲಿ ಅಥವಾ ನಿಖಿಲ್ ಕುಮಾರಸ್ವಾಮಿಯವರಾಗಲಿ ಈ ತರಹದ ಒಂದು ಸಂದರ್ಭ ಸಮೀಪಿಸಲು ಸಾಧ್ಯವಿಲ್ಲ. ಈ ರೀತಿಯಾದ ಸುಳ್ಳು ಸಂದೇಶವನ್ನು ಫೇಸ್ಬುಕ್ ಹಾಗೂ ವಾಟ್ಸಪ್ಗಳಲ್ಲಿ ಯಾರು ಹರಿಬಿಟ್ಟಿದ್ದಾರೋ ಈ ಕೂಡಲೇ ನಿಲ್ಲಿಸಬೇಕು. ನಿಖಿಲ್ ಕುಮಾರಸ್ವಾಮಿ ಅವರು ಬಹಳ ಆತ್ಮೀಯರು. ಕಿರಿಯ ಸೋದರನಂತೆ ನೋಡಿಕೊಂಡಿದ್ದಾರೆ ಕುಮಾರಣ್ಣ ಅವರು. ಈ ರೀತಿ ಸುಳ್ಳು ಸುದ್ದಿಯನ್ನು ಹಬ್ಬಿಸುವುದನ್ನು ಬಿಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಈ ರೀತಿಯಾದ ತಪ್ಪು ಸಂದೇಶಗಳನ್ನು ನೀಡುತ್ತಿರುವವರ ವಿರುದ್ಧ ಸೈಬರ್ ಕ್ರೈಂನಲ್ಲಿ ದೂರು ದಾಖಲು ಮಾಡುವುದಾಗಿ ತಿಳಿಸಿದ್ದಾರೆ.