ಮಂಡ್ಯ: ಮತದಾರರಿಗೆ ಹಂಚಲು ತಂದಿದ್ದರು ಎನ್ನಲಾದ 130 ಸೀರೆಗಳನ್ನು ವಶಕ್ಕೆ ಪಡೆದು ವ್ಯಕ್ತಿಯನ್ನು ಬಂಧಿಸಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಾಕ್ಷಿಬೀಡು ಗ್ರಾಮದಲ್ಲಿ ನಡೆದಿದೆ.
ಸೀರೆಗಳ ಮೇಲೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಭಾವಚಿತ್ರವಿದೆ. ಖಚಿತ ಮಾಹಿತಿ ಮೇರೆಗೆ ಚುನಾವಣಾ ಜಾಗೃತ ದಳದ ಅಧಿಕಾರಿಗಳು ದಾಳಿ ನಡೆಸಿ, ಸೀರೆ ಜೊತೆಗೆ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ಕೈಗೊಳ್ಳಲಾಗಿದೆ.