ಮಂಡ್ಯ: ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟದ ಅಕ್ರಮ ಗಣಿಗಾರಿಕೆ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು, ಇಂದು ಪಾಂಡವಪುರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿ ಆಕ್ರೋಶ ಹೊರ ಹಾಕಿದೆ.
ಬಿಜೆಪಿ ಕಾರ್ಯಕರ್ತರು, ರೈತ ಸಂಘದ ಕಾರ್ಯಕರ್ತರು ಪಾಂಡವಪುರ ಪೊಲೀಸ್ ಠಾಣೆ ಎದುರು ಧರಣಿ ಮಾಡಿ, ಅಕ್ರಮ ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆಕ್ರೋಶ ಹೊರ ಹಾಕಿದರು. ಬೇಬಿ ಬೆಟ್ಟದಲ್ಲಿ ನಿಷೇಧಾಜ್ಞೆ ಇದ್ದರೂ ಗಣಿಗಾರಿಕೆ ಮಾಡಲಾಗುತ್ತಿದೆ. ಕೂಡಲೇ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರು. ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಚರಣೆ ಮಾಡಬೇಕು. ಅಕ್ರಮ ಗಣಿಗಳಿಗೆ ಶಾಶ್ವತ ಬೀಗಮುದ್ರೆ ಹಾಕುವಂತೆ ಒತ್ತಾಯ ಮಾಡಿದರು.