ಮಂಡ್ಯ: ಹನುಮ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಇಂದು ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಭಕ್ತರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಉಡುಪಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಸ್ಲಿಂ ವ್ಯಾಪಾರಿಗಳಿಗೆ ಸದ್ಯಕ್ಕೆ ನಿರ್ಬಂಧವಿಲ್ಲ, ಮುಂದೆ ಆಗಬಹುದೇನೋ ಗೊತ್ತಿಲ್ಲ. ಕಾನೂನಿನ ಪ್ರಕಾರ ಅಗತ್ಯವಿದ್ದರೆ ಆಗುತ್ತದೆ ಎಂದರು. ಇದೇ ವೇಳೆ, ಆಯೋಧ್ಯೆ ರಾಮಮಂದಿರ ಬಗ್ಗೆ ಪ್ರತಿಕ್ರಿಯಿಸಿ, 2024 ರ ಜನವರಿಯಲ್ಲಿ ಸಂಕ್ರಾಂತಿಯ ನಂತರ ಗುಡಿಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಆಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕೆಲವರು ಚೀಪ್ ಪಬ್ಲಿಸಿಟಿಗೋಸ್ಕರ ಈ ರೀತಿ ಹೇಳಿಕೆ ನೀಡುತ್ತಾರೆ : ಪೇಜಾವರ ಶ್ರೀ