ETV Bharat / state

ಕೊರೊನಾ ನಿಯಮ ಉಲ್ಲಂಘಿಸಿ ನಿಮಿಷಾಂಬ ದೇವಾಲಯಕ್ಕೆ ಭಕ್ತರ ಆಗಮನ - Mandya District administration

ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಸ್ಥಾನಕ್ಕೆ ಬೀಗ ಹಾಕಿದ್ದರೂ ಸಹ ಇಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ.

mandya
ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಆಗಮಿಸಿದ ಭಕ್ತಗಣ
author img

By

Published : Aug 8, 2021, 1:12 PM IST

ಮಂಡ್ಯ: ಕೊರೊನಾ ಮೂರನೇ ಅಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಆದರೆ ಭಕ್ತರು ಮಾತ್ರ ಈ ಆದೇಶಕ್ಕೆ ಬೆಲೆ ಕೊಡದೇ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ.

ಈಟಿವಿ ಭಾರತ ಪ್ರತಿನಿಧಿ ವಾಕ್​ ಥ್ರೂ

ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಸ್ಥಾನಕ್ಕೆ ಬೀಗ ಹಾಕಿದ್ದರೂ ಸಹ ಇಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತ ಸಾಗರವೇ ಹರಿದು ಬಂದಿತ್ತು. ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ರಾಮನಗರ, ಚಾಮರಾಜನಗರ ಹಾಗೂ ಇತರೆ ಜಿಲ್ಲೆಗಳಿಂದ ಜನರು ಬರುತ್ತಿದ್ದು, ದೇವಸ್ಥಾನ ಬಾಗಿಲು ಮುಚ್ಚಿದ್ದರೂ ಸಹ ಬಾಗಿಲ ಬಳಿ ಪೂಜೆ ಸಲ್ಲಿಸಿದ್ದಾರೆ.

ಆರತಿ ಉಕ್ಕಡದ ಅಹಲ್ಯಾದೇವಿ ದೇವಸ್ಥಾನಕ್ಕೂ ಭಕ್ತರ ದಂಡು:

ಪ್ರಸಿದ್ಧ ಆರತಿ ಉಕ್ಕಡದ ಅಹಲ್ಯಾದೇವಿ ದೇವಸ್ಥಾನ ಹಾಗೂ ಶ್ರೀರಂಗನಾಥ ಸ್ವಾಮಿ ದೇವಾಲಯಕ್ಕೂ ನಿರ್ಬಂಧವಿದ್ದರೂ ಸಹ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ಬರುತ್ತಿದ್ದಾರೆ. ಉಕ್ಕಡದಮ್ಮ ದೇವಾಲಯಕ್ಕೆ ಇಂದು ಒಂದೇ ದಿನ ಕೋಟಿಗೂ ಅಧಿಕ ಆದಾಯ ಬರುತ್ತಿತ್ತು. ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ಇರುತ್ತಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.