ಮಂಡ್ಯ : ಐದು ದಿನಗಳ ಸಂಪೂರ್ಣ ಲಾಕ್‌ಡೌನ್ ಬಳಿಕ ಇಂದು ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿರುವ ಹಿನ್ನೆಲೆ ಮಂಡ್ಯದ ಎಪಿಎಂಸಿ ಮಾರುಕಟ್ಟೆ ಜನಜಂಗುಳಿಯಿಂದ ಕೂಡಿತ್ತು. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಜಿಲ್ಲಾಡಳಿತ ವಾರದಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಇಂದು ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿರುವುದರಿಂದ ಜನರು ತರಕಾರಿ, ಹಣ್ಣು ಖರೀದಿಗೆ ಮುಗಿಬಿದ್ದಿದ್ದರು.
ಕೆಲವರು ಮಾಸ್ಕ್ ಧರಿಸದೆ ಓಡಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಕೈಚೆಲ್ಲಿ ಕುಳಿತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
ಇದನ್ನೂ ಓದಿ: ವ್ಯಾಪಾರಿಗಳಿಂದ ಹಣ ವಸೂಲಿ ಮಾಡ್ತಿದ್ದ ಕೆಎಸ್ಆರ್ಪಿ ಪೇದೆ ಅರೆಸ್ಟ್