ETV Bharat / state

ಮದ್ದೂರು ಧಾಬಾದಲ್ಲಿ ಗಲಾಟೆ ಬಿಡಿಸಲು ಬಂದ ಯುವಕನೇ ಕೊಲೆಯಾದ

ಧಾಬಾದಲ್ಲಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಬಂದ ಯುವಕನನೇ ಕೊಲೆಗೀಡಾದ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.

person-murdered-in-madduru-dhaba
ಮದ್ದೂರು ಡಾಬಾದಲ್ಲಿ ಗಲಾಟೆ ಬಿಡಿಸಲು ಬಂದ ಯುವಕನನ್ನೇ ಕೊಲೆಯಾದ
author img

By

Published : May 9, 2022, 9:10 PM IST

ಮಂಡ್ಯ: ಗಲಾಟೆ ಬಿಡಿಸಲು ಬಂದ ಯುವಕನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿನ ಧಾಬಾದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ಗ್ರಾಮದ ಸಾಗರ್ (25) ಎಂಬಾತ ಕೊಲೆಯಾದ ಯುವಕನಾಗಿದ್ದಾನೆ.

ಧಾಬಾದಲ್ಲಿ ಊಟ ಮಾಡುತ್ತಿದ್ದಾಗ ಪಕ್ಕದ ಟೇಬಲ್​​ನಲ್ಲಿ ಗಲಾಟೆ ನಡೆಯುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಸಾಗರ್​ಗೆ ಚಾಕುವಿನಿಂದ ಇರಿಯಲಾಗಿದೆ. ಯುವಕ​ನ ಎದೆಗೆ ಚಾಕುವಿನಿಂದ ಇರಿದ ಗಿರೀಶ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ.

ತಕ್ಷಣ ಸಾಗರ್​ನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್​ಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ. ಆರೋಪಿ ರಾಕೇಶ್​ ಎಂಬಾತನನ್ನು ಸ್ಥಳೀಯರ ಸಹಾಯದೊಂದಿಗೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಗಿರೀಶ್​​, ಪ್ರತಾಪನಿಗಾಗಿ ಶೋಧ ಮುಂದುವರೆಸಿದ್ದಾರೆ. ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಿಯು ಪರೀಕ್ಷೆಯ ಕೊನೆಯ ದಿನ ತಾಯಿ ಕಣ್ತಪ್ಪಿಸಿ ಲವರ್​ ಜತೆ ವಿದ್ಯಾರ್ಥಿನಿ ಎಸ್ಕೇಪ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.