ಮಂಡ್ಯ: ಮುಂಬೈ ಸೋಂಕು ಜಿಲ್ಲೆಯ ಕೊರೊನಾ ವಾರಿಯರ್ಸ್‌ಗೂ ಅಂಟಿಕೊಂಡಿದೆ. ಕರ್ತವ್ಯ ನಿರತ ಮುಖ್ಯ ಪೇದೆಗೆ ಕೋವಿಡ್ 19 ದೃಢಪಟ್ಟಿದ್ದು, ಕೆ.ಆರ್.ಪೇಟೆಯ ಎರಡು ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.
ಕೆ.ಆರ್.ಪೇಟೆ ಪಟ್ಟಣ ಠಾಣೆಯ ಮುಖ್ಯ ಪೇದೆಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿ ಠಾಣೆಯನ್ನು ಸೀಲ್‌ಡೌನ್ ಮಾಡಿಸಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿದ್ದ ಗ್ರಾಮಾಂತರ ಹಾಗೂ ಪಟ್ಟಣ ಠಾಣೆ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಈ ಠಾಣಾ ವ್ಯಾಪ್ತಿಯಲ್ಲಿ ಬರುವ ತುರ್ತು ದೂರುಗಳನ್ನು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಸ್ವೀಕಾರ ಮಾಡಲಾಗುವುದು. ಬೇರೆ ಕಡೆಯಿಂದ ನಿಯೋಜನೆಗೊಂಡ ಸಿಬ್ಬಂದಿ ಪ್ರವಾಸಿ ಮಂದಿರದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ಎಸ್ಪಿ ಪರಶುರಾಮ್ ತಿಳಿಸಿದ್ದಾರೆ.