ಮಂಡ್ಯ: ಕೈ, ಕಾಲಿನ ನರ ಕುಯ್ದುಕೊಂಡು ಡಿವೈಎಸ್‌ಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‌ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿರುವ ಪೊಲೀಸ್ ಅಧಿಕಾರಿ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಅವರಿಗೆ ಶ್ರೀರಂಗಪಟ್ಟಣ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಎಸ್‌ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.