ಮಂಡ್ಯ: ಜೆಡಿಎಸ್ ಶಾಸಕ ನಾರಾಯಣ ಗೌಡರ ರಾಜೀನಾಮೆ ವದಂತಿ ಹಿನ್ನಲೆ ಅವರ ಕೆ.ಆರ್.ಪೇಟೆ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕೆ.ಆರ್.ಪೇಟೆ ಪಟ್ಟಣದಲ್ಲಿರುವ ನಿವಾಸಕ್ಕೆ ಗನ್‌ಮ್ಯಾನ್ ಹಾಕಲಾಗಿದೆ. ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಶಾಸಕರ ರಾಜೀನಾಮೆ ಪರ್ವದಲ್ಲಿ ಕೆ.ಸಿ.ನಾರಾಯಣಗೌಡರು ಇದ್ದಾರೆ ಎಂಬ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ