ಮಂಡ್ಯ: ಸರ್ಕಾರಿ ವಾಹನದಲ್ಲಿ ಯುವಕನೋರ್ವ ಕೆಆರ್‌ಎಸ್ ಡ್ಯಾಂಗೆ ಅತಿಕ್ರಮಣ ಪ್ರವೇಶ ಮಾಡಿ ಜಾಲಿ ಡ್ರೈವ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಯುವಕನಿಗೆ ಸರ್ಕಾರಿ ವಾಹನ ಕೊಟ್ಪಿದ್ದ ಪೊಲೀಸಪ್ಪನನ್ನ ಸಸ್ಪೆಂಡ್ ಮಾಡಿ ಆದೇಶಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಡ್ಯಾಂ ಮೇಲೆ ಪೊಲೀಸ್ ಜೀಪ್ ಚಲಾಯಿಸಿದ್ದಲ್ಲದೇ ಮೊಬೈಲ್ನಲ್ಲಿ ಚಿತ್ರೀಕರಣ ಸಹ ಮಾಡಲಾಗಿತ್ತು. ಕಾನೂನು ಪಾಲಿಸಬೇಕಿದ್ದ ಪೊಲೀಸ್ ಸಿಬ್ಬಂದಿಯೇ ಯುವಕನಿಗೆ ಸಾಥ್ ನೀಡಿದ್ದು, ಯುವಕ ಜೀಪ್ ಚಲಾಯಿಸುತ್ತಿದ್ರೆ, ಪಕ್ಕದಲ್ಲಿ ಕುಳಿತಿದ್ದ ಪೊಲೀಸ್ ಅಧಿಕಾರಿ ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕರ್ನಾಟಕ ಕೈಗಾರಿಕಾ ಭದ್ರತೆಯ 3ನೇ ಪಡೆಯಲ್ಲಿ ಕೆಲಸ ನಿರ್ವಹಿಸುವ ಸ್ವಾಮಿ ಎಂಬುವವರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಪೊಲೀಸ್ ಜೀಪ್ನಲ್ಲಿ ಕೆಆರ್‌ಎಸ್ ಡ್ಯಾಂ ಮೇಲೆ ಯುವಕನ ಜಾಲಿ ರೈಡ್ : ವಿಡಿಯೋ ವೈರಲ್
ಭದ್ರತೆ ದೃಷ್ಟಿಯಿಂದ ಡ್ಯಾಂ ಮೇಲೆ ಯಾರೂ ಸಂಚರಿಸದಂತೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿದ್ದರೂ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಯೇ ನಿಯಮ ಉಲ್ಲಂಘನೆ ಮಾಡಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.