ವಿಜಯಪುರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಿ ವಿವಿ ಕುಲಪತಿ ಆದೇಶ ಹೊರಡಿಸಿದ್ದಾರೆ.
3ನೇ ಸೆಮಿಸ್ಟರ್ ಪರೀಕ್ಷೆಗಳು ಆಗಸ್ಟ್ 7ರಂದು(ಇಂದಿನಿಂದ) ನಡೆಯಬೇಕಾಗಿತ್ತು. ಆದರೆ ಕೋವಿಡ್-19 3ನೇ ಅಲೆ ಜಿಲ್ಲೆಗೆ ಕಾಲಿಟ್ಟ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಆಗಸ್ಟ್ 16ಕ್ಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಲಪತಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಕೋವಿಡ್ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಗಮನಹರಿಸಬೇಕು. ಈ ಮೊದಲೇ ತಿಳಿಸಿದಂತೆ ಹೆಚ್ಚಿನ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ಮೇಲ್ ಮಾಡಲಾಗುವುದು. ಇಲ್ಲವೇ ಮಹಿಳಾ ವಿವಿ ವೈಬ್ ಸೈಟ್ನಲ್ಲಿ ಹಾಕಲಾಗುವುದು. ಈ ಕುರಿತು ಗಮನಿಸುತ್ತಿರಬೇಕೆಂದು ತಿಳಿಸಿದ್ದಾರೆ.