ಮಂಡ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಚೆಸ್ಕಾಂನ ಪವರ್ ಮ್ಯಾನ್ವೊಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.
ಚೋಕನಹಳ್ಳಿ ಗ್ರಾಮದ ರವಿ(34) ಮೃತ ನೌಕರ. ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಸಂಭವಿಸಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದ್ದಾರೆ. ಘಟನೆ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾವೇರಿ: ಎಪಿಎಂಸಿ ಕೊಠಡಿಯಲ್ಲಿ ಮಲಗಿದ್ದ ಇಬ್ಬರ ಕೊಲೆ... ಸಾವಿನ ಸುತ್ತ ಅನುಮಾನದ ಹುತ್ತ