ETV Bharat / state

ಅಕ್ರಮ ಗಣಿಗಾರಿಕೆ ಪಾಲುದಾರರ ವಿರುದ್ಧ ಕಾನೂನು ಕ್ರಮ ಜರುಗಿಸಿ: ಹೆಚ್​ಡಿಕೆ - Mandya

ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ಗೊತ್ತಿದ್ದರೂ ಜಿಲ್ಲಾಡಳಿತ ಸುಮ್ಮನೆ ಕುಳಿತಿದೆ. ಸರ್ಕಾರ ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

HD Kumaraswamy
ಹೆಚ್​.ಡಿ.ಕುಮಾರಸ್ವಾಮಿ
author img

By

Published : Jan 24, 2021, 7:59 PM IST

ಮಂಡ್ಯ: ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಪಾಲುದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

ಮದ್ದೂರಿನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ಗೊತ್ತಿದ್ದರೂ ಜಿಲ್ಲಾಡಳಿತ ಸುಮ್ಮನೆ ಕುಳಿತಿದೆ. ಸರ್ಕಾರ ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇನ್ನು ಅಕ್ರಮ ಗಣಿಗಾರಿಕೆ ಬಗ್ಗೆ ಜಗತ್ತಿಗೆ ಗೊತ್ತಾಗಿದೆ. ಅದರಲ್ಲಿ ಯಾರ್ಯಾರು ಇದ್ದಾರೆ ಅನ್ನೋದನ್ನು ಸರ್ಕಾರ ಬಯಲು ಮಾಡಬೇಕು ಎಂದು ಒತ್ತಾಯಿಸಿದರು.

ಗಣಿಗಾರಿಕೆ ಅಕ್ರಮ-ಸಕ್ರಮದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಕ್ರಮ ಗಣಿಗಾರಿಕೆಯಿಂದ ದುರ್ಘಟನೆಗಳು ಸಂಭವಿಸುತ್ತಿದ್ದವು. ಆದರೆ ಈಗ ಸಕ್ರಮ ಮಾಡಿಕೊಡ್ತೀವಿ, ನೀವು ಮುಂದುವರಿಸಿ ಎನ್ನುತ್ತಿದ್ದಾರೆ. ದುರ್ಘಟನೆಗಳು ಆಗಲಿ ಅಂತಾ ಸಕ್ರಮ ಮಾಡುತ್ತಿದ್ದೀರೋ ಎಂದು ಪ್ರಶ್ನಿಸಿದರು. ಮುಂದೆಯಾದರೂ ಈ ರೀತಿಯ ದುರ್ಘಟನೆ ನಡೆಯದಂತೆ ತಡೆಯಲು ಈ ರೀತಿ ಘೋಷಣೆ ಮಾಡಿದ್ದಾರೋ? ಸ್ಪಷ್ಟೀಕರಣ ಕೊಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಎಫ್​ಡಿಎ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ‌ ಮಾತನಾಡಿ, ಹಲವಾರು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಲೀಕ್ ಆಗುತ್ತಿರುವುದು ಸರ್ಕಾರದ ಆಡಳಿತದ ವೈಖರಿಯ ಬಗ್ಗೆ ಮನಗಾಣಬಹುದು ಎಂದು ಟೀಕಿಸಿದರು.

ಓದಿ: ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಭಾಗಿ : ವಧು-ವರರಿಗೆ ಶುಭಕೋರಿದ ಹೆಚ್​ಡಿಕೆ

ನಾಳೆ ಮಂಡ್ಯದಲ್ಲಿ ಜೆಡಿಎಸ್ ಶಾಸಕರ ಧರಣಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರ ಹಣ ಕೊಟ್ಟಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತರದಿರುವುದಕ್ಕೆ ಜಿಲ್ಲಾಧಿಕಾರಿ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಜನಪ್ರತಿನಿಧಿಗಳು ಸರ್ಕಾರದ ಯೋಜನೆ ಜಾರಿಗೆ ತರಲು ಹೋರಾಡುತ್ತಿದ್ದಾರೆ. ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.

ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿ, ಟೈಮ್ ಬಂದಾಗ ನೋಡೋಣ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.