ಮಳವಳ್ಳಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಪಟ್ಟಣದ ಮೈಸೂರು ರಸ್ತೆಯ ಆಕಾಶ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಿದ್ದರು. ಬಂಧಿತರಿಂದ 2,600 ರೂ. ವಶಪಡಿಸಿಕೊಂಡಿದ್ದು, ಬೆಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲೀಕ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.