ETV Bharat / state

ಮಂಡ್ಯ: ವಕೀಲನ ಹತ್ಯೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

author img

By

Published : Jan 4, 2021, 5:19 PM IST

ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ವಕೀಲ ರವೀಂದ್ರ ಹತ್ಯೆ ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಪಿಎಸ್​ಐ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯ್ತು.

protest against  advocate murder in mandya
ವಕೀಲನ ಹತ್ಯೆ ಖಂಡಿಸಿ ಪ್ರತಿಭಟನೆ

ಮಂಡ್ಯ: ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ವಕೀಲ ರವೀಂದ್ರ ಹತ್ಯೆ ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ವಕೀಲನ ಹತ್ಯೆ ಖಂಡಿಸಿ ಪ್ರತಿಭಟನೆ
ಮದ್ದೂರಿನ ಬೆಂಗಳೂರು - ಮೈಸೂರು ಹೆದ್ದಾರಿ ತಡೆದು ಮಾನವ ಸರಪಳಿ ನಿರ್ಮಿಸುವ ಮೂಲಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ಮೂಲಕ ಪ್ರತಿಭಟನಾಕಾರರು ವಕೀಲ ರವೀಂದ್ರರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೆ ಬಂಧಿಸುವಂತೆ ಆಗ್ರಹಿಸಿದರು.
ವಕೀಲರ ಹತ್ಯೆ ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕೊಡುವಂತೆ ಒತ್ತಾಯಿಸಿದರು. ಕಳೆದ ಬಾರಿ ಅಕ್ರಮ ಮರಳು ದಂಧೆ ಬಗ್ಗೆ ಧ್ವನಿ ಎತ್ತಿದ್ದ ರವೀಂದ್ರನನ್ನು ಹತ್ಯೆ ಮಾಡಿದ್ದಾರೆ. ಆತ ನ್ಯಾಯದ ಪರವಾಗಿ ನಿಲ್ಲುತ್ತಿದ್ದ. ಇಂತಹ ವ್ಯಕ್ತಿಯನ್ನು ಕೊಲೆ ಮಾಡಿರುವ ದೃಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಿಎಸ್​ಐ ಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.