ಮಂಡ್ಯ : ಸಚಿವ ಸಿ.ಎಸ್ ಪುಟ್ಟರಾಜು ಮನೆ ಮೇಲೆ ನಡೆದ ಐಟಿ ದಾಳಿ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರದ ಚಿನಕುರುಳಿ ಹತ್ತಿರದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಬಂದ್ ಮಾಡಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇನ್ನು ಐಟಿ ದಾಳಿಗೆ ಕೇಂದ್ರ ಸರ್ಕಾರ ಕಾರಣವೆಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.