ETV Bharat / state

ನೆಚ್ಚಿನ ಶಿಕ್ಷಕನ ವರ್ಗಾವಣೆಗೆ ಖಂಡನೆ.. ಶಾಲೆಗೆ ಬೀಗ ಜಡಿದು ಮಕ್ಕಳು - ಗ್ರಾಮಸ್ಥರಿಂದ ಪ್ರತಿಭಟನೆ - Protest by students for transfer the teachers in Mandya

ಮಂಡ್ಯ ಜಿಲ್ಲೆ ಕೆ. ಆರ್ ಪೇಟೆ ತಾಲೂಕಿನ ಕುರುಬಹಳ್ಳಿ ಶಾಲೆಯಲ್ಲಿ ಸುಮಾರು 8 ವರ್ಷಗಳಿಂದ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉದಯ್ ಕುಮಾರ್​ ಅವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

protest-by-students-for-transfer-the-teachers-in-mandya
ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
author img

By

Published : Jan 13, 2022, 5:52 PM IST

ಮಂಡ್ಯ: ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ಶಾಲೆಗೆ ಬೀಗ ಜಡಿದು ಮಕ್ಕಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಕುರುಬಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಬಳಿ ನಡೆದಿದೆ.

ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೆ. ಆರ್ ಪೇಟೆ ತಾಲೂಕಿನ ಕುರುಬಹಳ್ಳಿ ಶಾಲೆಯಲ್ಲಿ ಸುಮಾರು 8 ವರ್ಷಗಳಿಂದ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉದಯ್ ಕುಮಾರ್​ ಅವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಶಿಕ್ಷಕ ಉದಯ್ ಅವರನ್ನು ಮತ್ತೆ ನಮ್ಮ ಶಾಲೆಗೆ ಮರು ವರ್ಗಾಯಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು, ಶಿಕ್ಷಕ ಮರಳಿ ಬರುವವರೆಗೂ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ ಎಂದು ಗ್ರಾಮಸ್ಥರು ಎಚ್ಚರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಊರಿನ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಇಲ್ಲದೆ ಮುಚ್ಚುವ ಸ್ಥಿತಿಯಲ್ಲಿತ್ತು. ಆ ಸಂದರ್ಭದಲ್ಲಿ ನಮ್ಮ ಗ್ರಾಮದ ಮಕ್ಕಳಿಗೆ ಜ್ಞಾನಭಂಡಾರದಂತೆ ಸಂಸ್ಕೃತಿಯ ಬಗ್ಗೆ ಹಾಗು ಶಿಕ್ಷಣದ ಬಗ್ಗೆ ಅರಿವು ಮೂಡಿಸಿದ್ದರು. ಪ್ರಾಮಾಣಿಕ ಕರ್ತವ್ಯ ಜತೆಗೆ ನಮ್ಮ ಗ್ರಾಮದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ಶಿಕ್ಷಣ ನೀಡುತ್ತಿದ್ದ ಶಿಕ್ಷಕರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಖಂಡನೆ. ತಕ್ಷಣವೇ ಶಿಕ್ಷಕರನ್ನ ನಮ್ಮ ಊರಿಗೆ ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಓದಿ: ಸರ್ಕಾರಿ ಎಂಜಿನಿಯರಿಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಫ್ಯೂಚರ್ ಡಿಜಿಟಲ್ ಜಾಬ್ಸ್​​ಗೆ ಸಚಿವರಿಂದ ಚಾಲನೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.