ETV Bharat / state

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ

ವಿದ್ಯಾರ್ಥಿ ವೇತನ ಬಿಡುಗಡೆ ಮಾಡದಿದ್ದರೆ 60 ಲಕ್ಷ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂದು ಮಂಡ್ಯದಲ್ಲಿ ಬಿಎಸ್​ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದ್ದಾರೆ.

dsd
ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ
author img

By

Published : Jan 11, 2021, 5:23 PM IST

Updated : Jan 11, 2021, 7:20 PM IST

ಮಂಡ್ಯ: ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಬಹುಜನ್ ವಾಲಂಟಿಯರ್ ಪೋರ್ಸ್‌ ವತಿಯಿಂದ ಬಿಎಸ್​ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ನೇತೃತ್ವದಲ್ಲಿ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ

ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ಮೂಲಕ ತೆರಳಿ ಡಿಸಿ ಮೂಲಕ ಸಿಎಂ ಯಡಿಯೂರಪ್ಪಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು‌. ಎಂಜಿನಿಯರ್, ಬಿಎಡ್, ಮೆಡಿಕಲ್, ಡಿಪ್ಲೊಮಾ, ನರ್ಸಿಂಗ್, ಪ್ಯಾರಾಮೆಡಿಕಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದ‌ರು. ಮ್ಯಾನೇಜಮೆಂಟ್ ಕೋಟಾದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ನೀಡುತ್ತಿಲ್ಲ.

ಕಾಲೇಜಿನ ಡೊನೇಷನ್ ಕಟ್ಟುವಂತೆ ವಿದ್ಯಾರ್ಥಿಗಳಿಗೆ ಕಾಲೇಜುಗಳು ಒತ್ತಾಯ ಮಾಡುತ್ತಿವೆ. ಶುಲ್ಕ ಕಟ್ಟಲಾಗದೆ ವಿದ್ಯಾರ್ಥಿಗಳು ಗೋಳಾಡುತ್ತಿದ್ದಾರೆ. ವಿದ್ಯಾರ್ಥಿ ವೇತನವಿಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕುಂಠಿತವಾಗುತ್ತಿದೆ. ಶೀಘ್ರದಲ್ಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದಿದ್ದರೆ ಜ.26 ರಂದು ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾ ನಿರತರು ಎಚ್ಚರಿಸಿದ್ದಾರೆ.

Last Updated : Jan 11, 2021, 7:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.