ಮಂಡ್ಯ: ಪೆಟ್ರೋಲ್,ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ನೇತೃತ್ವದಲ್ಲಿ ನಗರದ ಸಂಜಯ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಜಾಥಾ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಜನಸಾಮಾನ್ಯರ ಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ, ತಕ್ಷಣವೇ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕೆಂದು ಒತ್ತಾಯ ಮಾಡಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ.. ಸಂಚಲನ ಸೃಷ್ಟಿಸಿದ ರಾಜ್ಯ ಸಚಿವರ ಸಿಡಿ ಪ್ರಕರಣ; ಪೊಲೀಸರಿಗೆ ದೂರು ನೀಡಲು ಮುಂದಾದ RTI ಕಾರ್ಯಕರ್ತ
ತಕ್ಷಣವೇ ಆಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.