ETV Bharat / state

ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಕೊರೊನಾದಿಂದ ಬೇರೆ ಎಲ್ಲೂ ಕೆಲಸ ಸಿಗುತ್ತಿಲ್ಲ. ಒಂದು ಹೊತ್ತು ಊಟಕ್ಕೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದರೆ ಕೂಲಿ ಸಿಗುತ್ತದೆ ಎಂದು ಕಾವೇರಿಪುರ ಗ್ರಾಮದ ನಿವಾಸಿಗಳು ಮನವಿ ಸಲ್ಲಿಸಿದರು.

ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡುವಂತೆ ಪ್ರತಿಭಟನೆ

author img

By

Published : Jul 17, 2020, 4:47 PM IST

ಮಂಡ್ಯ: ಕೆಆರ್‌ಎಸ್ ಸಮೀಪದ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಕಾವೇರಿಪುರ ಗ್ರಾಮದ ನಿವಾಸಿಗಳು ಪ್ರತಿಭಟನೆ ಮಾಡಿ ಡಿಸಿಗೆ ಮನವಿ ಸಲ್ಲಿಸಿದರು.

ಕೆಆರ್‌ಎಸ್ ಡ್ಯಾಂಗೆ ಅಪಾಯದ ಭೀತಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ ಗಣಿಗಾರಿಕೆ ನಿಷೇಧದಿಂದ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೊರೊನಾದಿಂದ ಬೇರೆ ಎಲ್ಲೂ ಕೆಲಸ ಸಿಗುತ್ತಿಲ್ಲ. ಒಂದು ಹೊತ್ತು ಊಟಕ್ಕೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದರೆ ಕೂಲಿ ಸಿಗುತ್ತದೆ ಎಂದು ಮನವಿ ಸಲ್ಲಿಸಿದರು.

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ

ಕಾನೂನಾತ್ಮಕವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿದರು. ಲಾರಿಗಳಲ್ಲಿ ಡಿಸಿ ಕಚೇರಿ ಬಳಿಗೆ ಆಗಮಿಸಿದ ಕಾರ್ಮಿಕರು, ಆಕ್ರೋಶ ಹೊರ ಹಾಕಿದರು.

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ:

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ, ಸಮಾವೇಶಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಸೆಕ್ಷನ್ 144 ಜಾರಿ ಮಾಡಿದೆ. ಆದರೆ ನಿರ್ಬಂಧದ ನಡುವೆಯೂ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.