ಮಂಡ್ಯ: ಮೂಲ ಸೌಕರ್ಯಗಳಿಲ್ಲದೆ ಸಣ‍್ಣ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರೀಯ ವಿದ್ಯಾಲಯಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಮಂಡ್ಯ ತಾಲೂಕಿನ ಬಿ.ಹೊಸೂರು ಕಾಲೋನಿಯ ಸರ್ಕಾರಿ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ನಡೆಯುತ್ತಿದ್ದು, ಮೂಲ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.
ಕಳೆದ ತಿಂಗಳು ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಂಸದೆ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದರು.
ಹೀಗಾಗಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ ರನ್ನು ಭೇಟಿಯಾಗಿ ಮೂಲ ಸೌಕರ್ಯ ಒದಗಿಸುವಂತೆ ಮತ್ತು ಕಟ್ಟಡ ನಿರ್ಮಾಣಕ್ಕೆ ಮುಂದಾಗುವಂತೆ ಮನವಿ ಸಲ್ಲಿಸಿದ್ದಾರೆ.