ಮಂಡ್ಯ: ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್-19 ವಿರುದ್ಧದ ಹೋರಾಟಕ್ಕೆ ಗ್ರಾಮಸ್ಥರಿಂದ ಅದ್ಧೂರಿ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ, ಎಎಸ್ಪಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಸಾಕ್ಷಿಯಾದರು.
ಈ ಹೃದಯ ಸ್ಪರ್ಶಿ ಘಟನೆ ನಡೆದದ್ದು, ತಾಲೂಕಿನ ಇಂಡುವಾಳು ಗ್ರಾಮದ ವೇದಿಕೆಯಲ್ಲಿ. ಇನ್ನು ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಆರೋಗ್ಯಾಧಿಕಾರಿ ಡಾ. ಮಂಚೇಗೌಡ, ಎಎಸ್ಪಿ ಶೋಭಾ ರಾಣಿ ಆಗಮಿಸುತ್ತಿದ್ದಂತೆ ಪುಷ್ಪಗಳನ್ನು ಅರ್ಪಿಸುವ ಮೂಲಕ ಸ್ವಾಗತಿಸಲಾಯಿತು.
ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಸೇರಿದಂತೆ ತಾಲೂಕಿನ ಎಲ್ಲ ಕೊರೊನಾ ವಾರಿಯರ್ಸ್ಗೆ ಸನ್ಮಾನಿಸಲಾಯಿತು. ವಿಶೇಷವಾಗಿ ಆಶಾ ಕಾರ್ಯಕರ್ತೆಯರಿಗೆ ತವರಿನ ಉಡುಗೊರೆ ರೀತಿಯಲ್ಲಿ ಸೀರೆಗಳನ್ನು ಕೊಟ್ಟು, ಅಭಿನಂದಿಸಲಾಯಿತು.
ಇಂತಹ ಕಾರ್ಯಕ್ರಮ ಸಂತಸದ ಜೊತೆಗೆ ಉತ್ಸಾಹ ಮೂಡಿಸಿದೆ. ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ಆಶಾ ಕಾರ್ಯಕರ್ತೆಯೊಬ್ಬರು ಭರವಸೆ ನೀಡಿದರು.