ಮಂಡ್ಯ: ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆಯುತ್ತಿದ್ದ ವೇಳೆ ಜಗಳ ಬಿಡಿಸಲು ಹೋದ ವ್ಯಕ್ತಿಯೇ ಹತ್ಯೆಯಾಗಿರುವ ದಾರುಣ ಘಟನೆ ಸಮೀಪದ ಬಿ.ಹಟ್ನಾ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವರುದ್ರ ಸ್ವಾಮಿ ಹತ್ಯೆಯಾದ ವ್ಯಕ್ತಿ. ಅದೇ ಗ್ರಾಮದ ವ್ಯಕ್ತಿಗಳೇ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಗ್ರಾಮದ ಸಂಪತ್ ಕುಮಾರ್ ಹಾಗೂ ನಾಗರಾಜು ಎಂಬವರ ಕುಟುಂಬದ ನಡುವೆ ಜಮೀನಿನ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಎರಡೂ ಕಡೆಯವರು ಮಾರಕಾಸ್ತ್ರ ಹಿಡಿದು ಬಡಿದಾಡಿಕೊಳ್ಳುತ್ತಿದ್ದರು. ಈ ವೇಳೆ ಶಿವರುದ್ರಪ್ಪ ಜಗಳ ಬಿಡಿಸಲು ಹೋಗಿದ್ದಾರೆ. ಜಗಳ ಬಿಡಿಸುತ್ತಿದ್ದಾಗ ಮಚ್ಚಿನ ಏಟು ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಇನ್ನೂ ಇಬ್ಬರಿಗೆ ಗಾಯವಾಗಿದ್ದು, ಗಾಯಾಳುಗಳು ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಕುಮಾರ್ ಹಾಗೂ ಅವರ ಪತ್ನಿ ದೀಪಾ ಮತ್ತು ಶಿವ ಪ್ರಕಾಶ್ ಎಂಬವರಿಗೆ ಗಾಯಗಳಾಗಿದ್ದು, ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.