ETV Bharat / state

ಮಂಡ್ಯದಲ್ಲಿ ಮತ್ತೊಂದು ನೀಚ ಕೃತ್ಯ: ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ವೃದ್ಧನಿಂದ ಆತ್ಯಾಚಾರ

ಟ್ಯೂಷನ್​ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರಗೈದು ಕೊಲೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ದುಷ್ಕೃತ್ಯ ಬೆಳಕಿಗೆ ಬಂದಿದೆ.

rape-on-minor-girl-in-mandya
ಮಂಡ್ಯದಲ್ಲಿ ಮತ್ತೊಂದು ನೀಚ ಕೃತ್ಯ: ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ವೃದ್ಧನಿಂದ ಆತ್ಯಾಚಾರ
author img

By

Published : Oct 17, 2022, 7:52 PM IST

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಷನ್​ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರಗೈದು ಕೊಲೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಅಂತಹದ್ದೇ ಪ್ರಕರಣ ಜಿಲ್ಲೆಯ ಹಲಗೂರಿನ ಸಮೀಪವಿರುವ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ವೃದ್ಧವೊಬ್ಬ ಅಪ್ರಾಪ್ತ ಬಾಲಕಿಗೆ ಊಟ, ತಿಂಡಿಯ ಆಮಿಷ ತೋರಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಸಮೀಪದ ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮವೊಂದರ 63 ವರ್ಷದ ವೃದ್ಧ ಪ್ರಕರಣದ ಆರೋಪಿ. ಈತ ಅದೇ ಗ್ರಾಮದ 15 ವರ್ಷದ ಬಾಲಕಿಗೆ ತಿಂಡಿ ಕೊಡಿಸುವುದಾಗಿ ಹಲಗೂರಿಗೆ ಕರೆದೊಯ್ದಿದ್ದಾನೆ. ಊಟ ಕೊಡಿಸಿದ ನಂತರ ಬಸವನಹಳ್ಳಿಗೆ ಕರೆದುಕೊಂಡು ಹೋಗಿ, ಬಾಲಕಿ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ನೀಡಲಾಗಿದೆ.

ಈ ಸಂಬಂಧ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಸಹೋದರಿ ಹಲಗೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಹಲಗೂರು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಮಂಡ್ಯ: ಟ್ಯೂಷನ್​ಗೆ ಕರೆದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಸಂಪ್​ಗೆ ಎಸೆದ ಕಿರಾತಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.