ಮಂಡ್ಯ: ನಾಗಮಂಗಲ ಜೆಡಿಎಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾರ್ಯಕರ್ತರಿಗೆ ಶಾಸಕರು ಬೇಡವಾಗಿದ್ದಾರೆ. ಇದರ ಮಧ್ಯೆ ಮಾಜಿ ಸಂಸದರು ನಾನೇ ಈ ಕ್ಷೇತ್ರದ ಅಭ್ಯರ್ಥಿ ಎಂದು ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ಚುನಾವಣೆಗೆ ಇನ್ನೂ ಎರಡೂವರೆ ವರ್ಷವಿದ್ದರೂ ಈಗಲೇ ಟಿಕೆಟ್ ಗಾಗಿ ಲಾಭಿ ಶುರುವಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲ ಜೆಡಿಎಸ್ ಮುಖಂಡರು ಒಕ್ಕೂರಲಿನಿಂದ ಸುರೇಶ್ ಗೌಡರಿಗೆ ಕೆಲಸ ಮಾಡಿ ಗೆಲ್ಲಿಸಿಕೊಂಡು ಬಂದಿದ್ದರು. ಆದರೆ ಈಗ ಎಲ್ಲವೂ ಬದಲಾವಣೆಯಾಗಿದೆ. ಜೆಡಿಎಸ್ ಕಾರ್ಯಕರ್ತರಿಗೆ ಜೆಡಿಎಸ್ ಶಾಸಕರು ಬೇಡವಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಜೆಡಿಎಸ್ ತಾಲೂಕು ಅಧ್ಯಕ್ಷರೇ ಇದಕ್ಕೆ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.
ಇದರ ಮಧ್ಯೆ ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ನಾನೇ ಮುಂದಿನ ಅಭ್ಯರ್ಥಿ ಎಂದು ಪ್ರಚಾರ ಕಾರ್ಯ ಶುರುಮಾಡಿದ್ದಾರೆ. ವಾರಕ್ಕೆ ನಾಲ್ಕು ದಿನ ಕ್ಷೇತ್ರದಲ್ಲೇ ಠಿಕಾಣಿ ಹೂಡಿ ಕಾರ್ಯಕರ್ತರ ಕಷ್ಟು ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಶಾಸಕರ ವಿರುದ್ಧದ ಅಸಮಾಧಾನವನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದಲ್ಲಿ ತಮ್ಮ ಹೆಸರು ಬಲಪಡಿಸಿಕೊಳ್ಳುತ್ತಿದ್ದಾರೆ.
ಓದಿ:ಮಹಾರಾಜ ಯದುವೀರ್ ವಿರುದ್ಧವೇ ತಿರುಗಿಬಿದ್ದ 'ಮೈಶುಗರ್' ಹೋರಾಟಗಾರರು
ನಾಗಮಂಗಲ ಜೆಡಿಎಸ್ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದ್ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದ ಶಾಸಕ ಸುರೇಶ್ ಗೌಡ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತ ಗುದ್ದಲಿ ಪೂಜೆಯಲ್ಲಿ ಮಗ್ನರಾಗಿದ್ದಾರೆ.