ಮಂಡ್ಯ: ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿಯಾದ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಶಿಂಷಾ ಸೇತುವೆ ಬಳಿ ನಡೆದಿದೆ.
ಅದೃಷ್ಟವಶಾತ್ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಲಾರಿ ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ಕಾರು ಮತ್ತು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ನಡೆಸಿದ್ದು, ಲಾರಿ ಚಾಲಕನ ಬಳಿ ಇದ್ದ 15 ಸಾವಿರ ನಗದು ಮತ್ತು ಮೊಬೈಲ್ ದೋಚಿ ಪರಾರಿಯಾಗಿದ್ದಾರೆ.
ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.