ಮಂಡ್ಯ: ಖಾಸಗಿ ಬಸ್‌ಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿಯ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೈಸೂರಿನ ತಜ್ಬುಲ್(40), ಮುದಸ್ಸಿರ್ ಅಹಮದ್ ಷರೀಫ್ (42) ಮೃತರು. ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ರಸ್ತೆ ವಿಭಜಕ ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಅದರಲ್ಲಿದ್ದ ಈ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.