ಮಂಡ್ಯ: ಜಿಲ್ಲೆಯ ನಾಲ್ಕು ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯ ಎರಡನೇ ಹಂತದ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.
ಈಗಾಗಲೇ ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೂರು ತಾಲೂಕಿನ 5,81,306 ಜನರಿಂದ ಇಂದು ಹಕ್ಕು ಚಲಾವಣೆಯಾಗಲಿದೆ. ಇನ್ನು, ಮತಗಟ್ಟೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮತದಾರರಿಗೆ ಸ್ಯಾನಿಟೈಸರ್ ವಿತರಣೆ, ಸ್ಕ್ರೀನಿಂಗ್ ಮಾಡಲಾಗುತ್ತಿದೆ.