ಮಂಡ್ಯ : ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬರದ ಹಲವು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ಕೆಪಿಸಿಸಿ ವಜಾ ಮಾಡಿ ಆದೇಶ ಹೊರಡಿಸಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಏಳು ಮಂದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ವಜಾ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ.
ಇವರೇ ವಜಾಗೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು :
- ಹೆಚ್.ಅಪ್ಪಾಜಪ್ಪ, ಮಂಡ್ಯ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,
- ಎ.ಎಸ್.ರಾಜೀವ್, ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,
- ಪುಟ್ಟರಾಮು, ಮಳವಳ್ಳಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,
- ಕೆ.ಜೆ.ದೇವರಾಜ್, ಮಳವಳ್ಳಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,
- ಎಂ.ಪ್ರಸನ್ನ, ನಾಗಮಂಗಲ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,
- ಕೆ.ಆರ್.ರವೀಂದ್ರ ಬಾಬು, ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,
- ಎಸ್.ಬಿ.ಪ್ರಕಾಶ್, ಮೇಲುಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಜಾಗೊಂಡವರಾಗಿದ್ದಾರೆ.
ಸುಮಲತಾ ಅಂಬರೀಶ್ ಪರ ಬಹಿರಂಗವಾಗಿ ಗುರುತಿಸಿಕೊಂಡಿದ್ದ ಎಲ್ಲರನ್ನೂ ತಕ್ಷಣವೇ ಜಾರಿಗೆ ಬರುವಂತೆ ಕೆಪಿಸಿಸಿ ವಜಾಗೊಳಿಸಿದೆ.