ETV Bharat / state

ಮದ್ದೂರಿನ ಹೊಳೆ ಆಂಜನೇಯ ಸ್ವಾಮಿ ದರ್ಶನ ಪಡೆದ ಶರತ್ ಬಚ್ಚೇಗೌಡ - ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮದ್ದೂರಿನ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

poojaa
poojaa
author img

By

Published : Aug 8, 2020, 1:21 PM IST

ಮಂಡ್ಯ: ಮದ್ದೂರಿನ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರಾವಣ ಶನಿವಾರದ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿ ನಂತರ ಮದ್ದೂರಿನ ಪ್ರಸಿದ್ಧ ದೇವಾಲಯ ಉಗ್ರನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ನೆರವೇರಿಸಿದರು.

ಆಂಜನೇಯ ಸ್ವಾಮಿ ದರ್ಶನ ಪಡೆದ ಶರತ್ ಬಚ್ಚೇಗೌಡ

ನಂತರ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಸ್ಥಾನಮಾನ ಕೊಟ್ಟಿದ್ದಾರೆ. ಕೆಳಮನೆಯಲ್ಲಿ ನಾವು ಜನರಿಂದ ಆಯ್ಕೆಯಾಗಿದ್ದೇವೆ. ಅವರನ್ನ ವಿಧಾನ ಪರಿಷತ್​ನಲ್ಲಿ ಆಯ್ಕೆ ಮಾಡಿ ಸ್ಥಾನಮಾನ ನೀಡಿದ್ದಾರೆ. ಅದರಲ್ಲಿ ವಿಶ್ವನಾಥ್, ಯೋಗೇಶ್ವರ್ ನಾಮೀನೇಟ್ ಆಗಿ ಹೋಗಿದ್ದಾರೆ ಎಂದು ಪರೋಕ್ಷವಾಗಿ ಎಂ.ಟಿ.ಬಿ ನಾಗರಾಜ್‌ ಅವರಿಗೆ ಟಾಂಗ್ ನೀಡಿದರು.

ಕೋವಿಡ್ ಕೈಮೀರಿ ಹೊಗ್ತಿದೆ. ಸರ್ಕಾರ ನಿಯಂತ್ರಣ ಮಾಡುವುದರ ಬಗ್ಗೆ ಗಮನ ಕೊಡ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕು ಎಂದರು.

ಕೋವಿಡ್ ಬಗ್ಗೆ ಕೆಲವೊಮ್ಮೆ ತುರ್ತು ತೀರ್ಮಾನ ತೆಗೆದುಕೊಳ್ಳಬೇಕು. ಕೆಲವೊಮ್ಮೆ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ಸೂಕ್ತವಾದ ಆರೋಗ್ಯ ಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಇಂತಹ ಸಂದರ್ಭಗಳಲ್ಲಿ ಯಾವುದೇ ಹಗರಣ ಹಾಗೂ ಅವ್ಯವಹಾರ ಆಗಿದ್ರೆ ಕುಳಿತು ಚರ್ಚೆ ಮಾಡುವುದರಲ್ಲಿ ತಪ್ಪಿಲ್ಲ.

ಅವ್ಯವಹಾರ ನಡೆಯದಿದ್ರೆ ಯಾಕೆ ಹೆದರಬೇಕು. ತನಿಖೆ ಆಗಲಿ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.