ಮಂಡ್ಯ: ಕೊರೊನಾ ನಂತರ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಮನೆಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ.
ಕುಳ್ಳಮ್ಮ, ಮರಿಯಮ್ಮ, ರಂಗಸ್ವಾಮಿ ಎಂಬುವರ ಮನೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿದ್ದು, ಮನೆಯಲ್ಲಿದ್ದ ಬೆಲೆ ಬಾಳುವ ಆಭರಣಗಳು ಸೇರಿದಂತೆ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.
ಈ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.