ಮಂಡ್ಯ: ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಆನಂದಗೌಡರ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಹೂಕೋಸು ಹಾಗೂ ಎಲೆಕೋಸನ್ನು ಕಾರ್ಮಿಕರಿಗೆ ವಿತರಣೆ ಮಾಡಿದರು.
ಚಾಮರಾಜನಗರ ಜಿಲ್ಲೆ ಕಳ್ಳಿಪುರ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 2 ಕ್ವಿಂಟಾಲ್ ಎಲೆಕೋಸನ್ನು ಮಂಡ್ಯದ ಎಸ್.ಡಿ.ಜಯರಾಂ ಬಡಾವಣೆ, ನಾಲಾ ಬಂದವಾಡಿಯ ಸ್ಲಂಗಳಲ್ಲಿರುವ ಜನರಿಗೆ ಉಚಿತವಾಗಿ ವಿತರಣೆ ಮಾಡಿದರು.
ಇಲ್ಲಿರುವ ಬಹುತೇಕರು ಕೂಲಿ ಕಾರ್ಮಿಕರಾಗಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಕೂಲಿ ಇಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನರಿತ ಆನಂದಗೌಡರ ತಮ್ಮ ಜಮೀನಿನಲ್ಲಿ ಬೆಳೆದಿದ್ದ ತರಕಾರಿಯನ್ನು ಉಚಿತವಾಗಿ ನೀಡಿದ್ದಾರೆ.