ಮಂಡ್ಯ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ಭಾರತೀನಗರದ ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಜಿ. ಮಾದೇಗೌಡ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ನಂತರ ಮಾತನಾಡಿ, ಜಿ.ಮಾದೇಗೌಡರು ಕಾವೇರಿ ಹೋರಾಟ ಸೇರಿದಂತೆ ಹಲವು ಹೋರಾಟಗಳನ್ನು ಜೀವನದುದ್ದಕ್ಕೂ ಮಾಡಿಕೊಂಡು ಬಂದಿದ್ದಾರೆ. ರಾಜಕೀಯ ಜೀವನದಲ್ಲಿ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅವರು ನೇರ, ದಿಟ್ಟ, ಖಡಕ್ ರಾಜಕಾರಣಿ ಎಂದು ಹೇಳಿದರು.
ಇದನ್ನೂ ಓದಿ: ಧಾರವಾಡ ಯೋಗೀಶ್ ಗೌಡ ಕೊಲೆ ಪ್ರಕರಣ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಸಿಬಿಐ ವಶಕ್ಕೆ
ಖಡಕ್ ಆಗಿ ಮಾತನಾಡಿದರೂ ಕೂಡ ಅವರ ಹೃದಯವಂತಿಕೆ ದೊಡ್ಡದು. ಜಿ. ಮಾದೇಗೌಡರು ಬೇಗ ಗುಣಮುಖರಾಗಿ ಬರಲಿ ಎಂದು ಸಿದ್ದರಾಮಯ್ಯ ಆಶಿಸಿದರು.