ಮಂಡ್ಯ: ಗ್ಯಾಸ್ ಗೋಡನ್‌ನ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಕಚೇರಿಯಲ್ಲಿದ್ದ ದಾಖಲೆ ಸೇರಿ ಕಂಪ್ಯೂಟರ್ ಬೆಂಕಿಗೆ ಆಹುತಿಯಾದ ಘಟನೆ ಪಾಂಡವಪುರ ತಾಲೂಕಿನ ಬಿಂಡಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.
ಬಿಂಡಹಳ್ಳಿ ಗ್ರಾಮದ ರಾಜೇಶ್ ಎಂಬುವರಿಗೆ ಸೇರಿದ ಈಶ್ವರಿ ಗ್ಯಾಸ್ ವಿತರಕ ಕೇಂದ್ರಕ್ಕೆ ಬೆಂಕಿ ಹಚ್ಚಲಾಗಿದ್ದು, ಘಟನೆಯಲ್ಲಿ ಗೋಡನ್ನಲ್ಲಿದ್ದ ದಾಖಲೆಗಳು ಸಂಪೂರ್ಣ ಭಸ್ಮವಾಗಿವೆ.
ಕಚೇರಿಗೆ ಬೆಂಕಿ ಬಿದ್ದಿದ್ದರಿಂದ ಕಚೇರಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಶಮನ ಮಾಡಿದರು. ಪಕ್ಕದಲ್ಲೇ ಇದ್ದ ಗ್ಯಾಸ್ ಗೋಡನ್‌ಗೆ ಯಾವುದೇ ಅಪಾಯ ಸಂಭವಿಸಿಲ್ಲ. ಈ ಸಂಬಂಧ ಕೆ.ಆರ್.ಎಸ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.