ETV Bharat / state

ವಿಶ್ವ ಹಿಂದೂ ಪರಿಷತ್​ನಿಂದ ಜೂ.4 ರಂದು ಶ್ರೀರಂಗಪಟ್ಟಣ ಚಲೋ - ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದ

ಜಾಮಿಯಾ ಮಸೀದಿ ಒಳಗೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ. ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್‌ಪಿ ಮನವಿ ಸಲ್ಲಿಸಿತ್ತು. ಆದರೆ ಇದಕ್ಕೆ ಡಿಸಿ ಸರಿಯಾಗಿ ಸ್ಪಂದಿಸಿದ ಕಾರಣ ಜೂನ್.4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ.

Jamia Mosque controversy in Srirangapatna Taluk
ಜಾಮಿಯಾ ಮಸೀದಿ
author img

By

Published : Jun 3, 2022, 4:19 PM IST

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಕಾರ್ಯಪ್ರವೃತ್ತವಾಗಿವೆ. ಇನ್ನೊಂದು ಕಡೆ ವಿಶ್ವ ಹಿಂದೂ ಪರಿಷತ್ ಜೂನ್.4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ.

ಜಾಮಿಯಾ ಮಸೀದಿ ಈ ಹಿಂದೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಟಿಪ್ಪು ಸುಲ್ತಾನ್ ದೇವಸ್ಥಾನದ ಮೇಲೆ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ. ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್‌ಪಿ ಮನವಿ ಸಲ್ಲಿಸಿತ್ತು.

ವಿಶ್ವ ಹಿಂದೂ ಪರಿಷತ್​ನಿಂದ ಶ್ರೀರಂಗಪಟ್ಟಣ ಚಲೋ

ಜಿಲ್ಲಾಧಿಕಾರಿಗಳು ಈ ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಹೆಚ್‌ಪಿ ಹಾಗೂ ಭಜರಂಗ ದಳದ ಪದಾಧಿಕಾರಿಗಳು ಜೂನ್. 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದ್ದಾರೆ. ಈ ಚಲೋದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಅಂದು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರವೇಶ ಮಾಡಿ ಆಂಜನೇಯಸ್ವಾಮಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನಸುಕಿನ ಜಾವ ಸ್ನೇಹಿತೆಯೊಂದಿಗೆ ಬೈಕ್​ನಲ್ಲಿ ಪ್ರಯಾಣ​.. ಮರಕ್ಕೆ ಡಿಕ್ಕಿ ಹೊಡೆದು ಇಬ್ಬರೂ ಸಾವು!

ಜೂನ್. 4 ರಂದು ಶ್ರೀರಂಗಪಟ್ಟಣ ಚಲೋ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಇರಿಸಲಾಗಿದೆ. ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಸೀದಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು, ಜೂನ್ 3 ಮತ್ತು 4ರಂದು ಜಾಮಿಯಾ ಮಸೀದಿ ಸುತ್ತ 144 ಸೆಕ್ಷನ್ ಜಾರಿಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.