ETV Bharat / state

ಅ. 9ರಿಂದ 3 ದಿನಗಳ ಕಾಲ ಜರುಗಲಿದೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ

ಅಕ್ಟೋಬರ್ 9 ರಿಂದ 11ರವರೆಗೆ 3 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ ನಡೆಯಲಿದೆ.

meeting on Srirangapattana Dasara
ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ ಸಭೆ
author img

By

Published : Sep 26, 2021, 7:12 AM IST

ಮಂಡ್ಯ: ಶ್ರೀರಂಗಪಟ್ಟಣ ದಸರಾಗೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 9 ರಿಂದ 11ರವರೆಗೆ 3 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಜರುಗಲಿದೆ. ಅಕ್ಟೋಬರ್ 9ರಂದು ಅಭಿಜಿನ್ ಲಗ್ನದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ. ಬಳಿಕ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಲಿದೆ.

ಶ್ರೀರಂಗಪಟ್ಟಣದಲ್ಲಿ ಶನಿವಾರ ದಸರಾ ಪೂರ್ವಭಾವಿ ಸಭೆ ನಡೆಸಲಾಯಿತು. ಸಚಿವ ಕೆ.ಸಿ. ನಾರಾಯಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯರು ಭಾಗಿಯಾಗಿದ್ರು.

ಸಭೆ ಆರಂಭದಲ್ಲೇ ಸಚಿವ ನಾರಾಯಣ ಗೌಡ ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆಯೂ ನಡೆಯಿತು. ಸಭೆಯನ್ನು ಶಿಸ್ತುಬದ್ಧವಾಗಿ ಆಯೋಜಿಸದ ಹಾಗೂ ಮೈಕ್ ಸರಿಯಿಲ್ಲದ ಬಗ್ಗೆ ಟೇಬಲ್​ಗೆ ಮೈಕ್ ಕುಟ್ಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ್ರು.

ಇದನ್ನೂ ಓದಿ: ಕಾಲಮಿತಿಯಲ್ಲಿ ಮೀಸಲಾತಿ ತರಲಾಗುವುದಿಲ್ಲ: ಯತ್ನಾಳ್​ಗೆ ಸಚಿವ ಸಿ.ಸಿ. ಪಾಟೀಲ್ ತಿರುಗೇಟು

ದಸರಾ ಮಹೋತ್ಸವಕ್ಕೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯ್ತು. ಕ್ರೀಡಾ ಸಚಿವರೇ ಮಂಡ್ಯ ಉಸ್ತುವಾರಿ ಸಚಿವರಾಗಿರೋದ್ರಿಂದ, ಈ ಬಾರಿಯ ಶ್ರೀರಂಗಪಟ್ಟಣ ದಸರಾದಲ್ಲಿ ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಒತ್ತು ನೀಡುವುದಾಗಿ ಸಚಿವರು ತಿಳಿಸಿದ್ರು.

ಕಳೆದ ವರ್ಷ ಕೊರೊನಾ ಹಿನ್ನೆಲೆ, ಒಂದು ದಿನಕ್ಕಷ್ಟೇ ಸೀಮಿತವಾಗಿದ್ದ ಶ್ರೀರಂಗಪಟ್ಟಣ ದಸರಾ ಈ ಬಾರಿ ಮೂರು ದಿನಕ್ಕೆ ವಿಸ್ತರಣೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.