ETV Bharat / state

ಮನ್​​​ಮುಲ್​ ಪ್ರಕರಣ: ಹಗರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ - ಹಗರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಈ ಮೊದಲು ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಸರಬರಾಜು ಮಾಡಲು ಟೆಂಡರ್‌ ಪಡೆದ ಗುತ್ತಿಗೆದಾರರು ಅಕ್ರಮವಾಗಿ ಟ್ಯಾಂಕರ್​ಗೆ ಅರ್ಧ ಹಾಲು ಅರ್ಧ ನೀರು ಮಿಶ್ರಣ ಮಾಡಿ ಕಲಬೆರಕೆ ಹಾಲನ್ನು ಪೂರೈಕೆ ಮಾಡುವುದರೊಂದಿಗೆ ಮಹಾಮೋಸ ಎಸಗಿರುವ ಸಂಗತಿ ಸಕ್ಕರೆ ನಾಡಿನಲ್ಲಿ ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ, ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ
ಮಂಡ್ಯ ಜಿಲ್ಲಾ ಹಾಲು ಒಕ್ಕೂಟ
author img

By

Published : Jun 30, 2021, 7:13 PM IST

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ(ಮನ್‌ಮುಲ್) ಹಗರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಯ ಉಪ ಕಾರ್ಯದರ್ಶಿ ಬಿ.ಎಸ್. ನಾಗರತ್ನಮ್ಮ ಅಧಿಕೃತ ಆದೇಶ ಹೊರಡಿಸಿದ್ದಾರೆ. ಮನ್‌ಮುಲ್‌ನಲ್ಲಿ ಹಾಲು ಸಾಗಣಿಕೆ ವಿಚಾರದಲ್ಲಿ ನಡೆದಿದ್ದ ಮೋಸ ಬೆಳಕಿಗೆ ತರಲು ಸರ್ಕಾರ ಈ ಆದೇಶ ಹೊರಡಿಸಿದೆ.

ಹಾಲಿಗೆ ನೀರು ಮಿಶ್ರಣ ಮಾಡಿ ಮೋಸ ಮಾಡುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಆಡಳಿತ ಮಂಡಳಿ ಏ.29ರಂದು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಕೋಟ್ಯಂತರ ರೂಪಾಯಿ ಹಗರಣ ಹಿನ್ನೆಲೆ ಉನ್ನತ ಮಟ್ಟದ ತನಿಖೆಗೆ ಕೂಗು ಕೇಳಿಬಂದ ಹಿನ್ನೆಲೆ ಸಿಐಡಿಗೆ ವಹಿಸುವುದಾಗಿ ಜೂ.14ರಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದರು. ಇಂದು ಸಿಐಡಿಗೆ ವಹಿಸಿ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.

state-government-ordered-the-cid-investigation-into-manmul-scam
ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಸಹಕಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರ ತನಿಖೆ ನಡೆಸಿ ನ್ಯಾಯಾಲಯ ಹಾಗೂ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿಐಡಿ ತಂಡಕ್ಕೂ ಪತ್ರದ ಮೂಲಕ ತಿಳಿಸಲಾಗಿದೆ.

ಓದಿ: ಶಾಸಕರ ಹಕ್ಕುಚ್ಯುತಿ ಕುರಿತು ಯತ್ನಾಳ್ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.