ETV Bharat / state

ಮಂಡ್ಯ: ಕಾಂಗ್ರೆಸ್ ಸಮಾವೇಶದಲ್ಲಿ ಕೊರೊನಾ ನಿಯಮಾವಳಿ ಮಾಯ - Mandya latest news

ಮಂಡ್ಯದಲ್ಲಿ ಇಂದು ನಡೆದ ರಾಜ್ಯ ಮಟ್ಟದ ರೈತ ಸಮಾವೇಶದಲ್ಲಿ ಕಾಂಗ್ರೆಸ್​ ನಾಯಕರು ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ನಡೆಸಿದ್ದಾರೆ.

ಕಾಂಗ್ರೆಸ್ ಸಮಾವೇಶ
State Level Farmer Conference
author img

By

Published : Oct 10, 2020, 7:55 PM IST

ಮಂಡ್ಯ: ನಗರದ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ರಾಜ್ಯ ಮಟ್ಟದ ರೈತ ಸಮಾವೇಶದಲ್ಲಿ ಕಾಂಗ್ರೆಸ್​ ನಾಯಕರು ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಯಕ್ರಮ ನಡೆಸಿದ್ದಾರೆ.

ರಾಜ್ಯ ಮಟ್ಟದ ರೈತ ಸಮಾವೇಶ

ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಕೇವಲ 100 ಮಂದಿಗೆ ಅವಕಾಶ ನೀಡಿದ್ದರೆ, ಅಲ್ಲಿ ಸಾವಿರಕ್ಕೂ ಅಧಿಕ ಮಂದಿ ಸೇರಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ ನೂಕುನುಗ್ಗಲು ಉಂಟಾಗಿದೆ.

ತೂಬಿನಕೆರೆ ಹೆಲಿಪ್ಯಾಡ್‌ಗೆ ಬಂದಿಳಿದ ಡಿ.ಕೆ. ಶಿವಕುಮಾರ್​ಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರುವ ಮೂಲಕ ಅಲ್ಲಿಯೂ ಕೂಡ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಕೆಲವರು ಮುಗಿಬಿದ್ದು ಸೆಲ್ಫಿಯನ್ನೂ ತೆಗೆದುಕೊಂಡರು. ಇತ್ತ ಮಾಜಿ ಸಿಎಂ ಸಿದ್ದರಾಮಯ್ಯಗೆ ಮದ್ದೂರಿನಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಸ್ವಾಗತಕ್ಕೆ ಜನಜಂಗುಳಿಯೇ ಇದ್ದರೂ ಸಿದ್ದರಾಮಯ್ಯ ಸ್ವಲ್ಪ ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿದರು,‌ ಆದರೂ ಕಾರ್ಯಕರ್ತರು ಮುಗಿ ಬಿದ್ದು ಸ್ವಾಗತ ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.