ಮಂಡ್ಯ: ತಾಲೂಕಿನ ಆನುಕುಪ್ಪೆ ಗ್ರಾಮದ ಸಮೀಪವೇ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಗ್ರಾಮದಲ್ಲಿನ ಮನೆಗಳು ಬಿರುಕು ಬಿಡುತ್ತಿವೆ. ಸುಮಾರು 10ಕ್ಕೂ ಹೆಚ್ಚು ಮನೆಗಳ ಮಾಲೀಕರು ಆತಂಕಗೊಂಡಿದ್ದು, ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಮನವಿ ಮಾಡಲಾಗಿದೆ.
ರಾತ್ರಿ ವೇಳೆ ಸ್ಫೋಟಕ ವಸ್ತುಗಳನ್ನು ಬಳಸಿ ಕಲ್ಲುಗಳನ್ನು ಸಿಡಿಸಲಾಗುತ್ತದೆ. ಇದರಿಂದ ಮನೆಗಳಲ್ಲಿ ಬಿರುಕು ಮೂಡಿದೆ. ಪ್ರಭಾವಿ ವ್ಯಕ್ತಿಗಳು ಗಣಿಗಾರಿಕೆ ನಡೆಸುತ್ತಿದ್ದು, ಸಮಸ್ಯೆ ಉಲ್ಬಣವಾಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರಾದ ಮಮತಾ ಆರೋಪಿಸಿದರು.
ಈಗಲಾದರೂ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆ ಬಗೆಹರಿಸಬೇಕು. ತೊಂದರೆಗೀಡಾದ ಮನೆಗಳಿಗೆ ಪರಿಹಾರ ಕೊಡಬೇಕಾಗಿದೆ.