ಮಂಡ್ಯ: ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ ಗಂಜಾಮ್ನಲ್ಲಿ ಬೀದಿ ನಾಯಿಯೊಂದು ಐವರು ಬಾಲಕರು ಸೇರಿ 15ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಗಂಜಾಮ್ ರಾಮಮಂದಿರ, ಬುಸಿಗೌಡ ಸರ್ಕಲ್, ಡೈರಿಗೆ ಬಂದ ಬಾಲಕರಿಗೆ ಕಚ್ಚಿ ಎಳೆದಾಡಿದೆ. ಈ ವೇಳೆ ಬಿಡಿಸಲು ಹೋದ ಹಲವರಿಗೆ ಈ ನಾಯಿ ದಾಳಿ ನಡೆಸಿ ಕಚ್ಚಿದೆ. 15ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿದ ಸುದ್ದಿ ತಿಳಿದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ನಾಳೆ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಉಪಚುನಾವಣೆ ಉಸ್ತುವಾರಿಗಳ ನೇಮಕ : ಸಿಎಂ ಬೊಮ್ಮಾಯಿ
ಸದ್ಯ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಕ್ರಮಕೈಗೊಳ್ಳದ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಬೀದಿ ನಾಯಿಗಳನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ.