ಮಂಡ್ಯ: ಕಾಲೇಜು ಹಿಂಭಾಗವೇ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.
ದಾಸನದೊಡ್ಡಿ ಗ್ರಾಮದ ಮಹದೇವಸ್ವಾಮಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಳವಳ್ಳಿ ಶಾಂತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾದೇವ ಸ್ವಾಮಿ, ಬೆಳಗ್ಗೆ ಕಾಲೇಜಿಗೆ ಹಿಂಭಾಗದ ಜಮೀನಿನ ಬಳಿ ತೆರಳಿ ವಿಷ ಸೇವಿಸಿದ್ದಾನೆ. ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಮಳವಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.