ಮಂಡ್ಯ: ಕುತಂತ್ರದಿಂದ ನನ್ನ ಅಧಿಕೃತ ಫೇಸ್ಬುಕ್ ಅಕೌಂಟ್ನ್ನು ಹ್ಯಾಕ್ ಮಾಡಲಾಗಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಟಿ ಸುಮಲತಾ ಅಂಬರೀಶ್ ಆರೋಪ ಮಾಡಿದ್ದಾರೆ.
ಈ ಹಿನ್ನೆಲೆ ಹೊಸ ಖಾತೆ ತೆರೆದಿರುವ ಸುಮಲತಾ, ತಮ್ಮ ಫೇಸ್ಬುಕ್ ಹ್ಯಾಕಿಂಗ್ ಸಂಬಂಧ ಫೇಸ್ಬುಕ್ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಜತೆಗೆ ಪ್ರಚಾರ ಕೂಡ ಹೊಸ ಖಾತೆಯಲ್ಲಿ ಮಾಡಲು ಮುಂದಾಗಿದ್ದಾರೆ. ಈ ಹೊಸ ಖಾತೆಗೆ ಅಭಿಮಾನಿಗಳು ಸೇರ್ಪಡೆಯಾಗಿ ಪ್ರಮೋಷನ್ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಮಂಡ್ಯ ಚುನಾವಣೆಗೆ ನಿಲ್ಲಲು ನಿರ್ಧರಿಸಿದಾಗ ಸುಮಲತಾ ಅವರು ಸುಮಲತಾ ಅಂಬರೀಶ್ ಎಂಬ ಹೆಸರಿನಲ್ಲಿ ಫೇಸ್ಬುಕ್ ಅಕೌಂಟ್ ತೆರೆದು ಅಭಿಮಾನಿಗಳ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದರು. ಅಲ್ಲದೆ, ಮಂಡ್ಯದಲ್ಲಿ ಪ್ರಚಾರ ಮಾಡುವ ಎಲ್ಲಾ ವಿಷಯಗಳನ್ನು ಸುಮಲತಾ ಅವರ ಫೇಸ್ಬುಕ್ ಪೇಜ್ನಲ್ಲಿ ಹಂಚಿಕೊಳ್ಳುತ್ತಿದ್ದರು. ಇದಕ್ಕೆ ಜನರ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿತ್ತು.