ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಎಲ್ಲಾ ಪಾರ್ಟಿಗಳು ಭರ್ಜರಿ ಸಿದ್ಧತೆ ನಡೆಸಿವೆ. ರಾಜ್ಯದಲ್ಲೂ ಚುನಾವಣೆ ಕಾವು ದಿನೇ ದಿನೆ ಹೆಚ್ಚುತ್ತಿದೆ. ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ.
ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಅಕಾಂಕ್ಷಿ ಸುಮಲತಾ ಅಂಬರಿಶ್ ಚುನಾವಣೆಗೆ ಜೋರಾಗಿ ತಯಾರಾಗುತ್ತಿದ್ದಾರೆ. ಖಾದಿ ಸೀರೆಯುಟ್ಟು ಸುಮಲತಾ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದಾರೆ. ಚುನಾವಣಾ ಕೆಲಸಗಳಿಗೆ ಹಾಗೂ ಪ್ರಚಾರಕ್ಕೆ ಅನುಕೂಲವಾಗಲೆಂದು ಸುಮಲತಾ ಈ ಪೋಟೋಶೂಟ್ ನಡೆಸಿದ್ದಾರೆ. ಈ ಮೂಲಕ ಸುಮಲತಾ ಮಂಡ್ಯ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.