ಮಂಡ್ಯ: ಸ್ವತಂತ್ರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿದ ಆರೋಪದಡಿ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಹನಕೆರೆ ಶಶಿ ಅವರನ್ನು ಅಮಾನತು ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ಉಚ್ಛಾಟನೆ ಮಾಡಲಾಗಿದ್ದು, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ನಿಂದ ಉಚ್ಛಾಟನೆ ಅಸ್ತ್ರ ಪ್ರಯೋಗವಾಗಿದ್ದು, ಸುಮಲತಾ ಬೆಂಬಲಿಗರಿಗೆ ಕೈ ಪಕ್ಷ ಶಾಕ್ ನೀಡಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜೊತೆ ಗುರುತಿಸಿಕೊಂಡಿದ್ದ ಸಚ್ಚಿದಾನಂದಗೆ ನೋಟೀಸ್ ನೀಡಿಲಾಗಿತ್ತು. ಆದರೂ ಸುಮಲತಾ ಸಮಾವೇಶದಲ್ಲಿ ಭಾಗಿಯಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಉಚ್ಛಾಟನೆ ಮಾಡಲಾಗಿದೆ.
ಇನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿದ್ದ ಹನಕೆರೆ ಶಶಿಯನ್ನು ಸಹ ಪಕ್ಷದಿಂದ ಅಮಾನತು ಮಾಡಲಾಗಿದೆ. ಇವರು ಸಹ ಸುಮಲತಾ ಜೊತೆ ಗುರುತಿಸಿಕೊಂಡಿದ್ದರು.