ಮಂಡ್ಯ : ಅವರು ಬಹಳ ದೊಡ್ಡವರು, ದೆಹಲಿ ಮಟ್ಟದಲ್ಲಿ ರಾಜಕಾರಣ ಮಾಡಿರುವಂತವರು ಎಂದು ನಾಗಮಂಗಲ ಕ್ಷೇತ್ರದ ಮುಂದಿನ ಶಾಸಕ ಸ್ಥಾನಕ್ಕೆ ನಾನೇ ಅಭ್ಯರ್ಥಿ ಎಂದ ಮಾಜಿ ಸಂಸದ ಎಲ್ ಆರ್ ರಮೆಶ್ ಅವರ ಹೇಳಿಕೆಗೆ ಶಾಸಕ ಸುರೇಶ್ ಗೌಡ ಟಾಂಗ್ ನೀಡಿದರು.
ಕೊಪ್ಪ ಹೋಬಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಪ್ರಶ್ನೆಗಳಿಗೆ ಉತ್ತರ ಕೊಡುವಷ್ಟು ದೊಡ್ಡವನು ನಾನಲ್ಲ.
ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಚುನಾವಣೆ ಬಂದಾಗ ನೋಡಿಕೊಳ್ಳುತ್ತೇನೆ ಎಂದು ಪರೋಕ್ಷವಾಗಿ ಎಲ್ ಆರ್ ಶಿವರಾಮೇಗೌಡ ವಿರುದ್ಧ ಸುರೇಶ್‌ಗೌಡ ಗುಡುಗಿದರು.
ಮದ್ದೂರು ತಾಲೂಕು ಕೊಪ್ಪ ಹೋಬಳಿಯಲ್ಲಿ ಸುವರ್ಣ ಗ್ರಾಮ ಯೋಜನೆಯಡಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಸುಮಾರು 72 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ ಯೋಜನೆ ಇದಾಗಿದ್ದು, ಗ್ರಾಮದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತೇನೆ ಎಂದು ಶಾಸಕ ಸುರೇಶ್ ಗೌಡ ತಿಳಿಸಿದರು.