ETV Bharat / state

ಕೊರೊನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾದ ಸ್ವಾಮೀಜಿ - ಚಂದ್ರವನ ಆಶ್ರಮ

ಮೈಸೂರು, ಮಂಡ್ಯ ಭಾಗದ ಸೋಂಕಿತರಿಗೆ ಆನ್​​ಲೈನ್ ಮೂಲಕ ಪ್ರವಚನ ನೀಡಲು ಮಂಡ್ಯದ ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಕಾರ್ಯಕ್ರಮ ರೂಪಿಸಿದ್ದಾರೆ..

Swamiji decide To fill self-confident for Corona infected
ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ
author img

By

Published : Aug 3, 2020, 3:46 PM IST

ಮಂಡ್ಯ : ಕೊರೊನಾ ಸೋಂಕಿತರು ಮಾನಸಿಕವಾಗಿ ದುರ್ಬಲವಾಗುತ್ತಿರುವ ಸಮಯದಲ್ಲಿ ಅವರಿಗೆ ಆತ್ಮಸ್ಥೈರ್ಯ ತುಂಬಲು ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮುಂದಾಗಿದ್ದಾರೆ.

ಇಂದು ತಮ್ಮ ಹುಟ್ಟುಹಬ್ಬವನ್ನು ಭಕ್ತರ ಸಮ್ಮುಖದಲ್ಲಿ ಸರಳವಾಗಿ ಆಚರಿಸಿಕೊಂಡ ಅವರು, ಸೋಂಕಿತರಿಗೆ ಮಾನಸಿಕ ಸ್ಥೈರ್ಯ ತುಂಬುವ ಕುರಿತು ಶ್ರೀರಂಗಪಟ್ಟಣ ತಾಲೂಕಿನ ಪಾಂಡವಪುರ ಉಪವಿಭಾಗಾಧಿಕಾರಿ ಜೊತೆ ಮಾತುಕತೆ ನಡೆಸಿದರು. ಮೈಸೂರು, ಮಂಡ್ಯ ಭಾಗದ ಸೋಂಕಿತರಿಗೆ ಆನ್​​ಲೈನ್ ಮೂಲಕ ಪ್ರವಚನ ನೀಡಲು ಸಿದ್ಧ ಎಂದು ಘೋಷಿಸಿದರು.

ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ

ಸಿಎಂ ಆರೋಗ್ಯಕ್ಕೆ ಪ್ರಾರ್ಥನೆ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ವೃದ್ಧಿಗಾಗಿ ಮಠದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು‌. ಚಂದ್ರಮೌಳೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆರೋಗ್ಯ ವೃದ್ಧಿಗಾಗಿ ಹರಕೆ ಸಲ್ಲಿಸಲಾಗಿದೆ. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.