ಮಂಡ್ಯ : ತರಗತಿಯಲ್ಲಿ ಪಾಠ ಮಾಡುವ ವೇಳೆ ಹೃದಯಾಘಾತವಾಗಿ ಶಿಕ್ಷಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಎಲೆ ಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಜೇಶ್ ಎಂಬುವರು ಮೃತಪಟ್ಟ ಶಿಕ್ಷಕರು. ಶುಕ್ರವಾರ ಮಧ್ಯಾಹ್ನ ತರಗತಿಯಲ್ಲಿ ಪಾಠ ಮಾಡುವ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಹತ್ತಿರದ ತೂಬಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ತರಗತಿಯಲ್ಲಿ ಶಿಕ್ಷಕ ಸಾವು : ಮೃತರ ನಿಧನಕ್ಕೆ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಹದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ಶಿಕ್ಷಕರ ಅಗಲಿಕೆಗೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.