ಮಂಡ್ಯ: ಬಾವಿಗೆ ಬಿದ್ದು ಟೆಕ್ಕಿ ಸಾವಿಗೀಡಾದ ಘಟನೆ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.
ಸುಜಿತ್ (22) ಬಾವಿಗೆ ಬಿದ್ದು ಸಾವಿಗೀಡಾಗಿದ ಯುವಕ.
ಈತ ತಾಲೂಕು ಕಚೇರಿಯಲ್ಲಿ ಶಿರಾಸ್ತೇದಾರ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಎಂಬವರ ಪುತ್ರ. ಸುಜಿತ್ ಕಳೆದ ವರ್ಷ ಸಿವಿಲ್ ಎಂಜಿನಿಯರಿಂಗ್ ಮುಗಿಸಿದ್ದಾನೆಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಎಂ. ವಿ. ರೂಪ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.